ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಾಯಿ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂದು ಅವರ ಮೃತದೇಹವನ್ನು ಹೈದರಾಬಾದ್ ನ ಪದ್ಮಾಲಯ ಸ್ಟುಡಿಯೋದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತಿದೆ. ತಾಯಿ ವಿಯೋಗದ ಸುದ್ದಿ ಬಂದ ಬೆನ್ನಲ್ಲೇ ಮಹೇಶ್ ಬಾಬು ಕುಟುಂಬಕ್ಕೆ ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸಿ ಸಂದೇಶ ನೀಡುತ್ತಿದ್ದಾರೆ.