ಈ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸಲಿದ್ದಾರಂತೆ ಮಹೇಶ್ ಬಾಬು

ಬುಧವಾರ, 9 ಸೆಪ್ಟಂಬರ್ 2020 (11:24 IST)
ಹೈದರಾಬಾದ್ : ಸರ್ಕಾರು ವಾರಿ ಪಾಟ ಚಿತ್ರತಂಡದಿಂದ ಟಾಲಿವುಡ್ ಫ್ರಿನ್ಸ್ ಮಹೇಶ್ ಬಾಬು ಅವರ  ಅಭಿಮಾನಿಗೊಂದು ಸಿಹಿಸುದ್ದಿ.

ಅದೇನೆಂದರೆ  ಮಹೇಶ್ ಬಾಬು ಅಭಿನಯದ ಸರ್ಕಾರು ವಾರಿ ಪಾಟ ಚಿತ್ರದ ಶೂಟಿಂಗ್ ಅಕ್ಟೋಬರ್ ನಲ್ಲಿ ಆರಂಭವಾಗಲಿದೆಯಂತೆ. ಅಲ್ಲದೇ ಈ ಸಿನಿಮಾದಲ್ಲಿ ಮಹೇಶ್ ಬಾಬು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಪರಶುರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯಾಗಿ ಕಿಯಾರ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಕಾರಣ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ