ಪ್ರಿನ್ಸ್ ಮಹೇಶ್ ಬಾಬು ವರ್ಕೌಟ್ ಫೋಟೋ ವೈರಲ್

ಗುರುವಾರ, 2 ಮಾರ್ಚ್ 2023 (09:40 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹೇಶ್ ಬಾಬು ಇದೀಗ ತ್ರಿವಿಕ್ರಮ್ ನಿರ್ದೇಶನದ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗಾಗಿಯೇ ಅವರು ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲು ಪರಿಶ್ರಮಪಡುತ್ತಿದ್ದಾರೆ ಎನ್ನಲಾಗಿದೆ.

ತಮ್ಮ ಮನೆಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಮಹೇಶ್ ಬಾಬು ದೇಹ ಹುರಿಗೊಳಿಸುತ್ತಿರುವ ಫೋಟೋ ನೋಡಿ ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ