ಮಹೇಶ್ ಬಾಬು ತಂದೆ, ಸೂಪರ್ ಸ್ಟಾರ್ ಕೃಷ್ಣ ನಿಧನ

ಮಂಗಳವಾರ, 15 ನವೆಂಬರ್ 2022 (08:30 IST)
ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಂದೆ, ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕೃಷ್ಣ ಇಂದು ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ನಿನ್ನೆ ತಡರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು.

ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ  ಅವರು ಆ ಕಾಲದಲ್ಲೇ ಸೂಪರ್ ಸ್ಟಾರ್ ಆಗಿ ಮೆರೆದವರು. ಅವರ ಕಲಾ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ 2009 ರಲ್ಲಿ ಪದ್ಮವಿಭೂಷಣ ನೀಡಿ ಗೌರವಿಸಿತ್ತು. ಸಿನಿಮಾವಲ್ಲದೆ, ರಾಜಕೀಯ ರಂಗದಲ್ಲೂ ಕೃಷ್ಣ ಕೆಲವು ಕಾಲ ಸೇವೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ ಅವರ ಪತ್ನಿ ಇಂದಿರಾ ದೇವಿ ಅನಾರೋಗ್ಯದಿಂದ ನಿಧನರಾಗಿದ್ದರು. ಪತ್ನಿ ತೀರಿಕೊಂಡ ಎರಡೇ ತಿಂಗಳಲ್ಲೇ ಕೃಷ್ಣ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಏಕಕಾಲಕ್ಕೆ ಅಪ್ಪ-ಅಮ್ಮನನ್ನು ಕಳೆದುಕೊಂಡ ಮಹೇಶ್ ಬಾಬು ಕುಟುಂಬ ತೀವ್ರ ದುಃಖದಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ