ನಿರ್ದೇಶಕ ಮಣಿರತ್ನಂ, ನಟ ವಿಕ್ರಂಗೆ ಕೋರ್ಟ್ ನೋಟಿಸ್
ಈ ಐತಿಹಾಸಿಕ ಸಿನಿಮಾದಲ್ಲಿ ಚೋಳರ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ ಎಂದು ವಕೀಲರೊಬ್ಬರು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದಲ್ಲಿ ಚೋಳರ ಬಗ್ಗೆ ನೀಡಿರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲು ವಿಶೇಷ ಪ್ರದರ್ಶನ ಏರ್ಪಡಿಸುವಂತೆ ಆಗ್ರಹಿಸಿದ್ದಾರೆ.
ಸೆಪ್ಟೆಂಬರ್ 30 ರಂದು ಸಿನಿಮಾ ತೆರೆಗೆ ಬರಲಿದ್ದು, ಕಳೆದ ವಾರ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ವೀಕ್ಷಿಸಿದ ಬೆನ್ನಲ್ಲೇ ಕೋರ್ಟ್ ನೋಟಿಸ್ ಬಂದಿದ್ದು, ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.