ಮರಾಠಿ ನಟಿ ಊರ್ಮಿಳಾ ಕೊಠಾರೆ ಕಾರು ಹರಿದು ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ

Sampriya

ಶನಿವಾರ, 28 ಡಿಸೆಂಬರ್ 2024 (18:29 IST)
Photo Courtesy X
ಮುಂಬೈ: ಮರಾಠಿ ನಟಿ ಊರ್ಮಿಳಾ ಕೊಠಾರೆ  ಅವರ ಕಾರು ಹರಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಕಂಡಿವಲಿಯಲ್ಲಿ ಅಪಘಾತ ಸಂಭವಿಸಿದೆ.

ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೆಟ್ರೋ ರೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ನಟಿಯ ಕಾರು ಡಿಕ್ಕಿ ಹೊಡೆದಿದೆ.

ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಪರಿಣಾಮ ಮೆಟ್ರೋ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಟಿ ಊರ್ಮಿಳಾ ಹಾಗೂ ಚಾಲಕ ಕೂಡ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸದ್ಯ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಅಪಘಾತದಲ್ಲಿ ನಟಿಯ ಕಾರಿಗೆ ಭಾರೀ ಹಾನಿಯಾಗಿದೆ. ಊರ್ಮಿಳಾ  ಅವರು ಮರಾಠಿಯ ದುನಿಯಾದಾರಿ, ಹಿಂದಿಯ ಥ್ಯಾಂಕ್ ಗಾಡ್ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ