ಮಾಸ್ತಿಗುಡಿ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ನಟ ದುನಿಯಾ ವಿಜಯ್ ಅರೆಸ್ಟ್

ಶುಕ್ರವಾರ, 8 ಜೂನ್ 2018 (14:52 IST)
ಬೆಂಗಳೂರು : ಮಾಸ್ತಿಗುಡಿ ಚಿತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಲೆಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.


ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯವನ್ನು ಚಿತ್ರಿಕರಿಸುತ್ತಿರುವಾಗ ಸಹನಟರಿಬ್ಬರು  ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರನ್ನು ಪೊಲೀಸರು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಅವರು ತಪ್ಪಿಸಿಕೊಳ್ಳಲು ದುನಿಯಾ ವಿಜಯ್ ನೆರವು ನೀಡಿದ್ದರಿಂದ ವಿಜಯ್ ಅವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಆಗ ಅವರನ್ನು ಬಂಧಿಸಲು  ಪೊಲೀಸರು ತೆರಳಿದ್ದಾಗ ಅವರು ತಲೆಮರೆಸಿಕೊಂಡಿರುವ ವಿಷಯ ತಿಳಿಯಿತು.


ವಿಜಯ್ ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರಿಗೆ ತಮಿಳುನಾಡಿನ ರೆಸಾರ್ಟ್ ವೊಂದರಲ್ಲಿ ವಿಜಯ್ ಇದ್ದಾರೆ ಎಂಬ ಖಚಿತ ಮಾಹಿತಿ ತಿಳಿದುಬಂದಿದ್ದು, ತಕ್ಷಣ ಅಲ್ಲಿಗೆ ತೆರಳಿದ್ದ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲಿಸರು ಇದೀಗ ವಿಜಯ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ