ಮೆಗಾಸ್ಟಾರ್ ಚಿರಂಜೀವಿ ಅಳಿಯ ಯುವನಟ ಕಲ್ಯಾಣ್ ದೇವ್ ಗೆ ಕೊರೊನಾ

ಶುಕ್ರವಾರ, 23 ಏಪ್ರಿಲ್ 2021 (08:02 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ  ಅಳಿಯ ಯುವನಟ ಕಲ್ಯಾಣ್ ದೇವ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕಲ್ಯಾಣ್ ಅವರಿಗೆ ಕೊರೊನಾ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಟೆಸ್ಟ್ ಮಾಡಿಸಲಾಗಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕವಾಗಿಸಿರಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ದೃಢಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ