ಪ್ಯಾನ್ ಇಂಡಿಯಾ ಒಪ್ಪಿಕೊಂಡ ‘ಜೊತೆ ಜೊತೆಯಲಿ’ ಖ್ಯಾತಿಯ ಮೇಘಾ ಶೆಟ್ಟಿ

ಶನಿವಾರ, 23 ಅಕ್ಟೋಬರ್ 2021 (09:41 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿಗೆ ಈಗ ಸ್ಯಾಂಡಲ್ ವುಡ್ ನಲ್ಲಿ ಒಂದಾದ ಮೇಲೊಂದರಂತೆ ಅವಕಾಶ ಸಿಗುತ್ತಿವೆ.


ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ನಟಿ ಬಳಿಕ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಸಿನಿಮಾಗೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದೀಗ ‘ಜಿಲ್ಕಾ’ ಸಿನಿಮಾ ಖ್ಯಾತಿಯ ಕವೀಶ್ ಶೆಟ್ಟಿ ನಿರ್ಮಿಸಿ, ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಮೇಘಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾ ಕನ್ನಡ, ಮರಾಠಿ, ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ಬಿಡುಗಡೆಯಾಗಲಿದೆ. ಸಿನಿಮಾದ ಬಗ್ಗೆ ಉಳಿದ ವಿವರಗಳನ್ನು ಚಿತ್ರತಂಡ ಸದ್ಯದಲ್ಲೇ ಪ್ರಕಟಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ