ಮುಂಬೈ : ಸಂಬಂಧ ಮುರಿದುಕೊಂಡ 22 ವರ್ಷದ ಯುವತಿಯನ್ನು ಆಕೆಯ ಮಾಜಿ ಗೆಳೆಯ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಘಟನೆ ಮಹಾರಾಷ್ಟ್ರದ ಮುಂಬೈ ನಲ್ಲಿ ನಡೆದಿದೆ.
ಆರೋಪಿ ಮತ್ತು ಸಂತ್ರಸ್ತೆಯ ನಡುವೆ ಸಂಬಂಧವಿದ್ದು, ಆದರೆ ಆರೋಪಿ ಮಾದಕ ದ್ರವ್ಯ ವ್ಯಸನಿಯಾಗಿದ್ದು, ಕೆಲಸ ಕಳೆದಕೊಂಡಿದ್ದ. ಈ ಹಿನ್ನಲೆಯಲ್ಲಿ ಸಂತ್ರಸ್ತೆ ಆತನ ಸಂಬಂಧ ಕಡಿದುಕೊಂಡಿದ್ದಾಳೆ. ಆದರೆ ಆರೋಪಿಗೆ ಸಂಬಂಧ ಕಡಿದುಕೊಳ್ಳುವುದು ಇಷ್ಟವಿರಲಿಲ್ಲ. ಹಾಗಾಗಿ ಸಂಬಂಧ ಮುಂದುವರಿಸುವಂತೆ ಯುವತಿಯ ಬಳಿ ಕೇಳಿದ್ದ. ಇದಕ್ಕೆ ಯುವತಿ ನಿರಾಕರಿಸಿದಾಗ ಕೋಪದಿಂದ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.