ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ

ಗುರುವಾರ, 27 ಫೆಬ್ರವರಿ 2020 (09:05 IST)
ಮೈಸೂರು: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


39 ವರ್ಷದ ಅರ್ಜುನ್ ಜನ್ಯಾಗೆ ಮಧ್ಯರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅವರು ಮೈಸೂರಿನ ತಮ್ಮ ನಿವಾಸದಲ್ಲಿದ್ದರು ಎನ್ನಲಾಗಿದೆ.

ಸದ್ಯಕ್ಕೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ ಮಧ್ಯಾಹ್ನದ ವೇಳೆ ವೈದ್ಯರು ಹೇಳಿಕೆ ನೀಡಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ