ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಫರ್ ಗಿಟ್ಟಿಸಿಕೊಂಡ ಶಾಸಕ ಪ್ರದೀಪ್ ಈಶ್ವರ್

Sampriya

ಶುಕ್ರವಾರ, 30 ಆಗಸ್ಟ್ 2024 (18:59 IST)
Photo Courtesy X
ಬಿಗ್‌ಬಾಸ್ ಸೀಸನ್ 10ರಲ್ಲಿ ಗೆಸ್ಟ್‌ ಆಗಿ ಹೋಗಿ ಸದ್ದು ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ಮೆಗಾಸ್ಟಾರ್ ಚಿರಂಜೀವಿ ಜತೆಗೆ ನಟನೆಗೆ ಆಫರ್ ಸಿಕ್ಕಿದೆ.

ವಿವಾದಾತ್ಮಕ ಹೇಳಿಕೆ ನೀಡುತ್ತಾ ಆಗಾಗ ಸುದ್ದಿಯಲ್ಲಿರುವ ಪ್ರದೀಪ್ ಈಶ್ವರ್ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ.  

ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಮೆಗಾಸ್ಟಾರ್ ಚಿರಂಜೀವಿಯವರ ದೊಡ್ಡ ಅಭಿಮಾನಿಯಾಗಿದ್ದು, ಈ ವಿಚಾರ ಅವರಿಗೂ ಗೊತ್ತಿದೆ.  ಚಿರಂಜೀವಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ.

ಇನ್ನೂ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಅವರಿಗೆ ಕರೆ ಮಾಡಿ ಶುಭಾಶಯಕೋರಿದ್ದೆ.  ನಟನೆಗೆ ಅವಕಾಶದ ಬಗ್ಗೆ ಚರ್ಚೆ ನಡೆದಿರೋದು ನಿಜ. ಸದ್ಯ ಚಿರಂಜೀವಿ ಅವರು ವಿಶ್ವಾಂಬರ ಚಿತ್ರದಲ್ಲಿ ಈಗ ನಟನೆ ಮಾಡುತ್ತಿದ್ದಾರೆ. ಇದಾದ ನಂತರ ಮುಂದಿನ ಚಿತ್ರದಲ್ಲಿ ಅವಕಾಶದ ಬಗ್ಗೆ ಚರ್ಚೆ ನಡೆದಿದೆ. ಯಾವ ಪಾತ್ರ ಏನು ಎಂಬುದು ಮುಂದಿನ ದಿನಗಳಲ್ಲಿ ಅವರೇ ತಿಳಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಚಿರಂಜೀವಿ ಅವರ ಜತೆ ಡ್ಯಾನ್ಸ್ ಮಾಡಬೇಕೆಂಬುದು ನನಗೆ ಆಸೆ ಒದೆ. ಅವರ ಜತೆ ಒಂದು ಸ್ಟೆಪ್ ಹಾಕಲು ಅವಕಾಶ ಸಿಕ್ಕರೂ ಅದು ನನ್ನ ಸೌಭಾಗ್ಯ ಎಂದು ಭಾವಿಸುತ್ತೇನೆ. ರಾಜಕೀಯದಲ್ಲಿ ನಾನು ಈಗಾಗಲೇ ಹಲವರನ್ನು ಡ್ಯಾನ್ಸ್ ಮಾಡಿಸಿದ್ದೀನಿ ಎಂದು ಟಾಂಗ್ ಕೊಟ್ಟರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ