ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಕೀರವಾಣಿ ಮುಂದಿನ ಸಿನಿಮಾ ಯಾವುದು?

ಸೋಮವಾರ, 20 ಮಾರ್ಚ್ 2023 (09:20 IST)
Photo Courtesy: Twitter
ಹೈದರಾಬಾದ್: ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಆರ್ ಆರ್ ಆರ್ ಸಿನಿಮಾದ ನಾಟ್ಟು ನಾಟ್ಟು ಹಾಡಿಗೆ ಕೀರವಾಣಿಗೆ ಆಸ್ಕರ್ ಒಲಿದುಬಂದಿತ್ತು. ಇದುವರೆಗೆ ರಾಜಮೌಳಿ ನಿರ್ದೇಶನದ ಎಲ್ಲಾ ಸಿನಿಮಾಗಳಿಗೆ ಕೀರವಾಣಿ ಸಂಗೀತ ನೀಡುತ್ತಿದ್ದಾರೆ.

ಇದೀಗ ರಾಜಮೌಳಿ ಪ್ರಿನ್ಸ್ ಮಹೇಶ್ ಬಾಬು ಜೊತೆಗೆ ಮುಂದಿನ ಸಿನಿಮಾ ಮಾಡಲಿದ್ದು, ಆ ಸಿನಿಮಾಗೂ ಕೀರವಾಣಿ ಸಂಗೀತ ಸಂಯೋಜಿಸಲಿದ್ದಾರೆ. ಇದುವೇ ತಮ್ಮ ಮುಂದಿನ ಸಿನಿಮಾ ಎಂದು ಕೀರವಾಣಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ