ಡಿ ಬಾಸ್ ದರ್ಶನ್ ರಾಬರ್ಟ್ ಸಿನಿಮಾ ಸೆಟ್ ನಲ್ಲಿ ಮೊಬೈಲ್ ಬ್ಯಾನ್

ಗುರುವಾರ, 9 ಮೇ 2019 (07:55 IST)
ಬೆಂಗಳೂರು: ಡಿ ಬಾಸ್ ದರ್ಶನ್ ಹೊಸ ಸಿನಿಮಾ ರಾಬರ್ಟ್ ಮುಹೂರ್ತ ಸಮಾರಂಭ ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಮುಗಿದಿದೆ.


ಇನ್ನು ಚಿತ್ರೀಕರಣವೂ ಪ್ರಾರಂಭವಾಗಿದೆ. ಆದರೆ ದರ್ಶನ್ ಸಿನಿಮಾ ಸೆಟ್ ನಲ್ಲಿ ನಿರ್ದೇಶಕ ತರುಣ್ ಸುಧೀರ್ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಯಾರೂ ಕೂಡಾ ಮೊಬೈಲ್ ಬಳಸುವಂತಿಲ್ಲ ಎಂದು ಫರ್ಮಾನು ಹೊರಡಿಸಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಮೊಬೈಲ್ ಮೂಲಕ ಚಿತ್ರೀಕರಿಸಿ ಸಿನಿಮಾ ಕತೆ, ಲುಕ್ ಲೀಕ್ ಮಾಡುವುದು ಸಾಮಾನ್ಯವಾಗಿದೆ. ಹೀಗಾಗಿ ಇದ್ಯಾವುದೂ ಮಾಡದಂತೆ ಮೊಬೈಲ್ ನಿಷೇಧಿಸಲಾಗಿದೆ. ಈ ಬಗ್ಗೆ ಕಲಾವಿದರು ಮತ್ತು ಚಿತ್ರದ ತಾಂತ್ರಿಕ ಸಿಬ್ಬಂದಿ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ