ಕಿಚ್ಚನ ಮ್ಯಾಕ್ಸ್‌ ಬಗ್ಗೆ ಮೋಹಕತಾರೆ ರಮ್ಯಾ ಶಾಕಿಂಗ್ ಪ್ರತಿಕ್ರಿಯೆ ಹೀಗಿತ್ತು

Sampriya

ಮಂಗಳವಾರ, 7 ಜನವರಿ 2025 (18:46 IST)
Photo Courtesy X
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಸಂಬಂಧ ಕೋರ್ಟ್‌ ವಿಚಾರಣೆಗೆ ಹಾಜರಾದ ಬಳಿಕ ರಮ್ಯಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ ಎಂದರು.

ಮತ್ತೇ ಯಾವಾಗ ಸಿನಿಮಾದಲ್ಲಿ ನಿಮ್ಮನ್ನು ನೋಡಬಹುದು ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ನನಗೆ ಒಳ್ಳೆಯ ಸ್ಕ್ರಿಪ್ಟ್ ಬಂದಿಲ್ಲ. ಅಂತಹ ಸ್ಕ್ರಿಪ್ಟ್ ಸಿಕ್ಕರೆ ಅಭಿನಯಿಸುತ್ತೇನೆ ಎಂದರು.

ಕನ್ನಡ ಸಿನಿಮಾ ರಂಗದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೀಗ ಒಳ್ಳೆಯ ಸಿನಿಮಾಗಳು ಬರುತ್ತಿರುವುದು ಖುಷಿಯ ವಿಚಾರ. ಮ್ಯಾಕ್ಸ್‌ ಅಂತಹ ಒಳ್ಳೆಯ ಸಿನಿಮಾಗಳು ಬರುತ್ತಿದೆ ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಕೆಲ ದಾಖಲೆಗಳನ್ನು ನೀಡಲು ಹೇಳಿತ್ತು. ಅವರು ಕೇಳಿದ್ದ ಎಲ್ಲಾ ದಾಖಲೆಗಳನ್ನು ಕೊಟ್ಟಿದ್ದೇನೆ. ನೇರವಾಗಿ ಬಂದು ಕೊಡೋಕೆ ಹೇಳಿದ್ದರು. ಹಾಗಾಗಿ ವಿಚಾರಣೆಗೆ ಬಂದಿದ್ದೇನೆ. ಈ ಪ್ರಕರಣ ಕೋರ್ಟ್‌ನಲ್ಲಿರುವ ಕಾರಣಕ್ಕೆ ಹೆಚ್ಚೇನು ಮಾತನಾಡಲ್ಲ ಎಂದು ಮಾತನಾಡಿದ್ದಾರೆ.

ಅಂದಹಾಗೆ, ಜನವರಿ 15ಕ್ಕೆ ಒರಿಜಿನಲ್ ಅಗ್ರಿಮೆಂಟ್ ಕಾಪಿ ಜೊತೆಗೆ ಕೋರ್ಟ್‌ಗೆ ಬರಲು ರಮ್ಯಾಗೆ ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ