ಒಂದೇ ದಿನ ಬಿಡುಗಡೆಯಾಗಲಿದೆ ಗಾಳಿಪಟ 2, ಮಾನ್ಸೂನ್ ರಾಗ

ಸೋಮವಾರ, 9 ಮೇ 2022 (08:50 IST)
ಬೆಂಗಳೂರು: ಆಗಸ್ಟ್ 12 ರಂದು ಸ್ಯಾಂಡಲ್ ವುಡ್ ನಲ್ಲಿ ಎರಡು ಪ್ರಮುಖ ಸಿನಿಮಾಗಳು ಬಿಡುಗಡೆ ದಿನಾಂಕ ಘೋಷಣೆ ಮಾಡಿಕೊಂಡಿವೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಗಾಳಿಪಟ 2 ಸಿನಿಮಾ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾ ಎಂದರೆ ಒಳ್ಳೆ ಕತೆ ಜೊತೆ ಮನರಂಜನೆಗೂ ಕೊರತೆಯಿರಲ್ಲ.

ಇದೇ ದಿನ ಡಾಲಿ ಧನಂಜಯ್- ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿರುವ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆಯಾಗಲಿದೆ. ಇದೂ ಕೂಡಾ ಪೋಸ್ಟರ್ ನಿಂದಲೇ ಗಮನ ಸೆಳೆಯುತ್ತಿದೆ. ಹೀಗಾಗಿ ಒಂದೇ ದಿನ ಈ ಎರಡೂ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಪೈಪೋಟಿ ನಡೆಸಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ