ನವದೆಹಲಿ: ನಟ ಧನುಷ್ ಜೊತೆ ಪ್ರೀತಿಯಲ್ಲಿದ್ದಾರೆಂಬ ಗಾಸಿಪ್‌ಗೆ ನಟಿ ಮೃಣಾಲ್ ಠಾಕೂರ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಇತ್ತೀವಿನ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ ಅವರು, ಧನುಷ್ ಹಾಗೂ ನಾನು ಉತ್ತಮ ಸ್ನೇಹಿತರು. ಧನುಷ್ ನನಗೆ ಒಳ್ಳೆಯ ಸ್ನೇಹಿತ ಅಷ್ಟೇ ಎಂದು ಮೃಣಾಲ್ ಹೇಳಿದ್ದಾರೆ.
ರಜನಿಕಾಂತ್ ಪುತ್ರಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನುಷ್ ಅವರು ಕಳೆದ 2ವರ್ಷಗಳ ಹಿಂದೆ ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ್ದರು. ಈಚೆಗೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.
ಈ ಜೋಡಿಯು ಅನೇಕ ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಇವರಿಬ್ಬರು ಪ್ರೀತಿಯಲ್ಲಿರುವುದಕ್ಕೆ ಮತ್ತಷ್ಟು ಪುಷ್ಟಿ ನೀಡಿತ್ತು.