ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ ಮನೋರಂಜನ್ ಅಭಿನಯದ ಮುಗಿಲ್ ಪೇಟೆ

ಸೋಮವಾರ, 9 ಮೇ 2022 (11:19 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಾಯಕರಾಗಿ ಅಭಿನಯಿಸಿರುವ ಮುಗಿಲ್ ಪೇಟೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲು ರೆಡಿಯಾಗಿದೆ.

ಮುಗಿಲ್ ಪೇಟೆ ಸಿನಿಮಾ ಈಗಾಗಲೇ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಂಡಿತ್ತು. ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರದ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿತ್ತು.

ಇದೀಗ ಈ ಸಿನಿಮಾ ಜೀ5 ಆಪ್ ನಲ್ಲಿ ಮೇ 13 ರಂದು ರಿಲೀಸ್ ಆಗುತ್ತಿದೆ. ಇದೇ ದಿನ ಜೀ5 ಆಪ್ ನಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೂಡಾ ರಿಲೀಸ್ ಆಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ