ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

Sampriya

ಶುಕ್ರವಾರ, 20 ಜೂನ್ 2025 (16:58 IST)
Photo Credit X
ಬೆಂಗಳೂರು: ಮೊದಲ ಬಾರೀ ನಿರ್ಮಾಣಕ್ಕೆ ಕೈ ಹಾಕಿದ ನಟ ರಾಕಿಂಗ್ ಸ್ಟಾರ್‌ ಯಶ್ ಅವರ ತಾಯಿ ನಿರ್ಮಾಣದ ಕೊತ್ತಲವಾಡಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್‌ ಆಗಿದೆ. 

ತಾಯಿ ಪುಷ್ಪ ಅರುಣ್ ಕುಮಾರ್  ತಮ್ಮದೇ ಪಿಎ ಪ್ರೊಡಕ್ಷನ್ಸ್ ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿಎಂಬ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ಕೊತ್ತಲವಾಡಿ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 

ಪೃಥ್ವಿ ಅಂಬರ್‌ಗೆ ಜೋಡಿಯಾಘಿ ಕಿರುತೆರೆ ನಟಿ ಕಾವ್ಯಾ ಶೈವ ಅಭಿನಯಿಸಿದ್ದಾರೆ. 

ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವ್ವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕೊತ್ತಲವಾಡಿ ಟೀಸರ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ