ರಶ್ಮಿಕಾ ಡೀಪ್ ಫೇಕ್ ವಿಡಿಯೋಗೆ ಬಗ್ಗೆ ಪ್ರತಿಕ್ರಿಯಿಸಿದ ನಟ ನಾಗಚೈತನ್ಯ

ಮಂಗಳವಾರ, 7 ನವೆಂಬರ್ 2023 (17:28 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣರ ಅವರ ಡೀಪ್ ಫೇಕ್ ವಿಡಿಯೋ ಬಗ್ಗೆ ಟಾಲಿವುಡ್ ಸ್ಟಾರ್ ನಾಗಚೈತನ್ಯ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾಗೆ ಬೆಂಬಲ ವ್ಯಕ್ತಪಡಿಸಿದ ಅನೇಕ ಕಲಾವಿದರ ಪಟ್ಟಿಗೆ ಈಗ ನಾಗಚೈತನ್ಯ ಕೂಡಾ ಸೇರ್ಪಡೆಯಾಗಿದ್ದಾರೆ. ವಿಡಿಯೋ ಆತಂಕಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಡಿಯೋವನ್ನು ನೋಡಿದರೆ ಆತಂಕವಾಗುತ್ತದೆ. ಭವಿಷ್ಯದಲ್ಲಿ ತಂತ್ರಜ್ಞಾನದಿಂದಾಗಿ ಏನೆಲ್ಲಾ ಆಗಲಿದೆಯೋ ಎಂದು ಭಯವಾಗುತ್ತಿದೆ ಎಂದಿದ್ದಾರೆ. ರಶ್ಮಿಕಾ ನಕಲಿ ವಿಡಿಯೋ ಬಗ್ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡಾ ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೆ, ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ