ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ನಟ ನಾನಿ

ಮಂಗಳವಾರ, 5 ಡಿಸೆಂಬರ್ 2023 (11:50 IST)
Photo Courtesy: Twitter
ಬೆಂಗಳೂರು: ಹಾಯ್ ನಾನಾ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ನ್ಯಾಚುರಲ್ ಸ್ಟಾರ್ ನಾನಿ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಹಾಯ್ ನಾನ ಚಿತ್ರ ಡಿಸೆಂಬರ್ 7 ಕ್ಕೆ ರಿಲೀಸ್ ಆಗಲಿದೆ. ಈ ಸಿನಿಮಾ ಪ್ರಚಾರಕ್ಕಾಗಿ ನಾನಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ದೊಡ್ಮನೆಗೆ ಭೇಟಿ ನೀಡಿದ್ದಾರೆ.

ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ದಂಪತಿ ನಾನಿಯನ್ನು ಸ್ವಾಗತಿಸಿದ್ದಾರೆ. ಈ ವೇಳೆ ಶಿವಣ್ಣ ಹಾಯ್ ನಾನ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಈ ಸಿನಿಮಾದಲ್ಲಿ ನಾನಿಗೆ ಜೋಡಿಯಾಗಿ ಮೃಣಾಲ್ ಠಾಕೂರ್ ಅಭಿನಯಿಸಿದ್ದಾರೆ. ಚಿತ್ರತಂಡ  ತಂದೆ-ಮಗಳ ಬಾಂಧವ್ಯದ ಭಾವನಾತ್ಮಕ ಕತೆ ಸಿನಿಮಾದಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ