ಮದುವೆ, ಬಾಡಿಗೆ ತಾಯ್ತನದ ಬಗ್ಗೆ ಮೌನ ಮುರಿದ ನಯನತಾರಾ
ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಕೆಲವು ಸಮಯದಿಂದ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮದುವೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಈಗ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮಿಬ್ಬರ ಬಗ್ಗೆ ಬರುತ್ತಿರುವ ಸುದ್ದಿಗಳಿಗೆ ನಯನತಾರಾ ಸ್ಪಷ್ಟನೆ ನೀಡಿದ್ದಾರೆ.
ನಾವಿಬ್ಬರೂ ಕದ್ದು ಮುಚ್ಚಿ ಮದುವೆಯಾಗಿಲ್ಲ. ಮದುವೆಯೇ ಆಗಿಲ್ಲ ಎಂದ ಮೇಲೆ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಪ್ರಶ್ನೆಯೇ ಇಲ್ಲ. ಇದೆಲ್ಲಾ ಸುಳ್ಳು ಸುದ್ದಿಗಳು ಎಂದು ನಯನತಾರಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.