ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಮುಂದಾದ ನಯನತಾರಾ?

ಮಂಗಳವಾರ, 22 ಮಾರ್ಚ್ 2022 (11:06 IST)
ಹೈದರಾಬಾದ್: ನಟಿ ನಯನತಾರಾ ಮತ್ತು ವಿಘ್ನೇಶ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಪ್ರಯತ್ನಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಈ ಜೋಡಿ ಕಳೆದ ಕೆಲವು ವರ್ಷದಿಂದ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಮಾತುಗಳೂ ಇವೆ.

ವಿವಾಹದ ಬಳಿಕ ನಯನತಾರಾ-ವಿಘ್ನೇಶ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇತ್ತೀಚೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಂಪತಿ ಈ ರೀತಿ ಹೆಣ್ಣು ಮಗುವಿನ ಪೋಷಕರಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ