ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾದ ಬಗ್ಗೆ ನೆಗೆಟಿವ್ ಆಗಿ ರಿವ್ಯೂ ನೀಡಿದ್ದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಸುಧಾಕರ್ ಗೌಡ ಬಂಧನ ಸುದ್ದಿ ಬಗ್ಗೆ ಆತನೇ ಸ್ಪಷ್ಟನೆಯನ್ನು ನೀಡಿದ್ದಾನೆ.
'ಮಾರ್ಟಿನ್' ಸಿನಿಮಾ ಬಗ್ಗೆ ಸುಧಾಕರ್ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ರಿವ್ಯೂ ನೀಡಿದ್ದ. ಇದು ಧ್ರುವ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಆತ ಕ್ಷಮೆ ಕೇಳಿ ವಿಡಿಯೋ ಮಾಡಿದ್ದರು.
'ಮಾರ್ಟಿನ್' ಸಿನಿಮಾ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಡಿಯೋ ಮಾಡಿ ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸುಧಾಕರ್ ಗೌಡ ಬಂಧನ ಬಗ್ಗೆಯೂ ವದಂತಿ ಹಬ್ಬಿತ್ತು. ಆದರೆ ಇದೆಲ್ಲಾ ಸುಳ್ಳು ಎಂದು ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
'ಮಾರ್ಟಿನ್' ಸಿನಿಮಾ ವಿಚಾರದಲ್ಲಿ ವಿವಾದ ಸೃಷ್ಟಿಸಿಕೊಳ್ಳುತ್ತಿದ್ದಂತೆ ಧ್ರುವ ಸರ್ಜಾ ಫ್ಯಾನ್ಸ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು ಎನ್ನಲಾಗಿತ್ತು. ಅದಲ್ಲದೆ ಆತನನ್ನು ವಶಕ್ಕೆ ಪಡೆದು, ಅಪಾಲಜಿ ಪತ್ರ ಬರೆಸಿಕೊಂಡು 'ಮಾರ್ಟಿನ್' ಸಿನಿಮಾ ರಿವ್ಯೂ ವೀಡಿಯೋ ಡಿಲೀಟ್ ಮಾಡಿಸಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.
ಇದೀಗ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸುಧಾಕರ್ ಗೌಡ ಅವರು, "ನನ್ನ ಬಂಧನವಾಗಿದೆ ಎನ್ನುವುದು ಸುಳ್ಳು. ಒಂದು ವೇಳೆ ನಾನು ಬಂಧನವಾಗಿದ್ದರೆ ನಿಮ್ಮ ಜೊತೆ ಮಾತನಾಡಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ. ನನಗೆ ಬಂದ ಬೆದರಿಕೆ ಕರೆಗಳ ಬಗ್ಗೆ ದೂರು ನೀಡಲು ಠಾಣೆಗೆ ಹೋಗಿದ್ದೆ. ಅದನ್ನೆ ಕೆಲವರು ನೋಡಿ ನನ್ನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ಸುದ್ದಿ ಹರಡಿದ್ದಾರೆ.