ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಪುತ್ರ ನಿಖಿಲ್ ಗಿಫ್ಟ್ ಏನು ಗೊತ್ತಾ?

ಸೋಮವಾರ, 17 ಡಿಸೆಂಬರ್ 2018 (09:34 IST)
ಬೆಂಗಳೂರು: ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡ ಸಿಎಂ ಕುಮಾರಸ್ವಾಮಿಗೆ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.


ಅಪ್ಪನ ಬರ್ತ್ ಡೇ ಗೆ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ‘ಓ ಜಾನು..’ ಎಂಬ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಲಾಯಿತು. ಈ ಚಿತ್ರಕ್ಕೆ ಕುಮಾರಸ್ವಾಮಿಯೇ ನಿರ್ಮಾಪಕರು.

ಅನೂಪ್ ರುಬಿನ್ಸ್ ಸಂಗೀತ ನೀಡಿರುವ ಹಾಡಿಗೆ ಕೆ ಕಲ್ಯಾಣ್ ಸಾಹಿತ್ಯ ಬರೆದಿದ್ದಾರೆ. ಕುಮಾರಸ್ವಾಮಿ ಜನ್ಮದಿನದಂದೇ ವಿಶೇಷವಾಗಿ ಈ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಈ ಹಾಡಿಗೆ ಯೂ ಟ್ಯೂಬ್ ನಲ್ಲಿ ಉತ್ತಮ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

ಇನ್ನು, ಅಪ್ಪನ ಬರ್ತ್ ಡೇ ನಿಮಿತ್ತ ನಿಖಿಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದು, ನೀವೇ ನನ್ನ ಹೀರೋ. ಲವ್ ಯೂ ಅಪ್ಪ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ