ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜಕೀಯದಲ್ಲೇ ಮುಳುಗಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ತಮ್ಮ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.
ನಿಖಿಲ್ ತಮ್ಮ ಅಭಿನಯದ ರೈಡರ್ ಸಿನಿಮಾದ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ನಿಖಿಲ್ ನಾಯಕರಾಗಿರುವ ಸಿನಿಮಾ ಇದಾಗಿದೆ.
ವಿಜಯ್ ಕುಮಾರ್ ಕೊಂಡ ನಿರ್ದೇಶನದ ಸಿನಿಮಾ ಈಗ ಫೈನಲ್ ಹಂತದಲ್ಲಿದ್ದು, ಇದೇ ವರ್ಷ ತೆರೆಗೆ ಬರುವ ನಿರೀಕ್ಷೆಯಿದೆ. ಈ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಇದರಲ್ಲಿ ಅವರು ಬಾಸ್ಕೆಟ್ ಬಾಲ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.