ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟ ನಿಖಿಲ್ ಕುಮಾರಸ್ವಾಮಿ
ಮಂಗಳವಾರ, 4 ಮೇ 2021 (10:01 IST)
ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿರುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಇದೀಗ ಹೋಂ ಕ್ವಾರಂಟೈನ್ ನಲ್ಲಿದ್ದು, ಕಳೆದ ಎರಡು ವಾರಗಳಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ನಾನೀಗಲೂ ಹೋಂ ಕ್ವಾರಂಟೈನ್ ನಲ್ಲಿದ್ದು, ನನ್ನ ಆರೋಗ್ಯ ಸುಧಾರಿಸುತ್ತಿದೆ. ಯಾರೂ ಆತಂಕಪಡಬೇಕಾಗಿಲ್ಲ. ನಿಮ್ಮೆಲ್ಲಾ ಪ್ರಾರ್ಥನೆ, ಹಾರೈಕೆಗೆ ಧನ್ಯವಾದ ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.