ಪೈಲ್ವಾನ್ ನಿರ್ದೇಶಕರ ಜೊತೆ ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ

ಮಂಗಳವಾರ, 1 ಅಕ್ಟೋಬರ್ 2019 (09:28 IST)
ಬೆಂಗಳೂರು: ಕಿಚ್ಚ ಸುದೀಪ್ ಜೊತೆಗೆ ಪೈಲ್ವಾನ್ ಸಿನಿಮಾ ಮಾಡಿದ್ದ ನಿರ್ದೇಶಕ ಕೃಷ್ಣ ಈಗ ನಿಖಿಲ್ ಕುಮಾರಸ್ವಾಮಿಗಾಗಿ ಒಂದು ಸಿನಿಮಾ ಮಾಡಲು ಹೊರಟಿದ್ದಾರೆ.


ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ನಿಖಿಲ್ ಕುರುಕ್ಷೇತ್ರ ಸಿನಿಮಾ ಪ್ರಚಾರದಲ್ಲೂ ಅಷ್ಟೊಂದು ಕಾಣಿಸಿಕೊಂಡಿರಲಿಲ್ಲ. ಇದೀಗ ಕೆಲವು ದಿನಗಳ ಬ್ರೇಕ್ ನ ನಂತರ ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ 2.0 ಸಿನಿಮಾ ನಿರ್ಮಿಸಿದ್ದ ಲೈಕಾ ನಿರ್ಮಾಣ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸಲಿದೆ. ಆದರೆ ಸಿನಿಮಾ ಟೈಟಲ್, ಉಳಿದ ಪಾತ್ರವರ್ಗ ಇನ್ನೂ ಅಂತಿಮವಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ