ಸ್ಯಾಂಡಲ್ ವುಡ್ ಗೂ ಕಾಲಿಟ್ಟ ಕೊರೋನಾ: ಖ್ಯಾತ ನಟಿಗೆ ಸೋಂಕು

ಶನಿವಾರ, 8 ಜನವರಿ 2022 (16:45 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ಬಾಲಿವುಡ್, ಟಾಲಿವುಡ್ ನಟರನ್ನು ಕಾಡಿದ್ದು, ಇದೀಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದೆ.

ಸ್ಯಾಂಡಲ್ ವುಡ್ ನಟಿ ನಿಶ್ವಿಕಾ ನಾಯ್ಡುಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಕುರಿತು ನಿಶ್ವಿಕಾ ಪ್ರಕಟಣೆ ನೀಡಿದ್ದಾರೆ. ಸದ್ಯಕ್ಕೆ ಹೋಂ ಐಸೋಲೇಷನ್ ಗೊಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ನಿಶ್ವಿಕಾ ತಿಳಿಸಿದ್ದಾರೆ.

ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್ ಸಿನಿಮಾದಲ್ಲಿ ನಟಿಸುತ್ತಿರುವ ನಿಶ್ವಿಕಾ, ಗುರು ಶಿಷ್ಯರು, ಯೋಗರಾಜ್ ಭಟ್ಟರ ಗಾಳಿಪಟ 2 ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ