ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಸೂಕ್ಷ್ಮ ವಲಯ ಪ್ರದೇಶದಲ್ಲಿ ಗಣೇಶ್ ಒಡೆತನದಲ್ಲಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಈ ಕಟ್ಟಡ ನಿರ್ಮಾಣ ಪ್ರಕ್ರಿಯೆ ನಿಯಮ ಮೀರಿ ಮಾಡಲಾಗಿದೆ ಎಂದು ಕಂಡುಬಂದ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲು ಅರಣ್ಯ ಇಲಾಖೆ ನೋಟಿಸ್ ನೀಡಿದೆ.
ಸೂಕ್ಷ್ಮ ವಲಯದಲ್ಲಿ ಕಾಂಕ್ರೀಟ್, ಜೆಸಿಬಿ ಬಳಸಿ ಕಟ್ಟಡ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ.