ನಟಿ ಶೃತಿ ಹರಿಹರನ್​ಗೆ ನೋಟಿಸ್

ಶುಕ್ರವಾರ, 9 ಜೂನ್ 2023 (20:50 IST)
2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ನಟನಿಂದ ಲೈಂಗಿಕ ಕಿರುಕುಳ ಆಗಿದೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಈ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಆದರೆ, ಪೊಲೀಸರಿಗೆ ಸಾಕ್ಷ್ಯ ಸಿಗದ ಕಾರಣ ಕೋರ್ಟ್​ನಲ್ಲಿ ಬಿ ರಿಪೋರ್ಟ್​ ಸಲ್ಲಿಕೆ ಮಾಡಿದ್ದರು. ಇದನ್ನು ಶ್ರುತಿ ಹರಿಹರನ್ ಚಾಲೆಂಜ್ ಮಾಡಿದ್ದರು. ಅವರಿಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್​ನಿಂದ ನೋಟಿಸ್​ ಜಾರಿ ಆಗಿದೆ. ಸಾಕ್ಷ್ಯ ಒದಗಿಸುವಂತೆ ಸೂಚಿಸಲಾಗಿದೆ. ಮೀಟೂ ಪ್ರಕರಣದಲ್ಲಿ ಪೊಲೀಸರು ಮೂರು ವರ್ಷ ತನಿಖೆ ನಡೆಸಿದರು. ಆದರೆ, ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಶ್ರುತಿಗೆ ನೋಟಿಸ್ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ