ಅನಾರೋಗ್ಯದಿಂದ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ನಿನ್ನೆಗಿಂತಲೂ ಇಂದು ಆರೋಗ್ಯ ಮತ್ತಷ್ಟು ಸುಧಾರಣೆ ಕಂಡಿದೆ. ಇವತ್ತು ಕಣ್ತೆರೆದು ರಾಘವೇಂದ್ರ ರಾಜ್ ಕುಮಾರ್ ಜೊತೆ ಮಾತನಾಡಿರುವ ಅಮ್ಮ, ದೊಡ್ಡವನೆಲ್ಲಿ, ಚಿಕ್ಕವನೆಲ್ಲಿ ಎಂದು ಕೇಳಿದರು ಎಂದು ವರದಿಯಾಗಿದೆ. ಉಸಿರಾಟದ ತೊಂದರೆ ಇರುವುದರಿಂದ ವೆಂಟಿಲೇಟರ್ ಅಳವಡಿಸಲಾಗಿದೆ. ಆದರೂ ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಈ ಮಧ್ಯೆ, ಶಿವಣ್ನ, ಪುನೀತ್ ಮತ್ತು ರಾಘಣ್ನ ಆಸ್ಪತ್ರೆಯಲ್ಲೇ ಇದ್ದಾರೆ. ಇತ್ತ, ಚಿತ್ರರಂಗದ ಹಲವು ಕಲಾವಿದರು, ನಿರ್ದೇಶಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಎಸ್. ನಾರಾಯಣ್, ಸಾಯಿಪ್ರಕಾಶ್, ಹಿರಿಯ ನಟ ಶ್ರೀನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ