ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
ರೆಗ್ಯುಲರ್ ಜಾಮೀನಿನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳು ಮತ್ತೆ ಜೈಲು ಸೇರಿದ್ದರು. ಇದರ ನಡುವೆ ಪವಿತ್ರಾ ಗೌಡ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಆದರೆ ಈಗ 57 ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಶಾಕ್ ನೀಡಿದೆ. ಇದರಿಂದಾಗಿ ಪವಿತ್ರಾ ಮತ್ತೆ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಇನ್ನು ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ವಿಚಾರಣೆ ಮುಂದುವರಿದಿದೆ.
ಈಗಷ್ಟೇ ನ್ಯಾಯಾಧೀಶರು ವಿಚಾರಣೆ ಕೈಗೆತ್ತಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಇದರ ತೀರ್ಪು ಹೊರಬರುವ ಸಾಧ್ಯತೆಯಿದೆ. ಒಂದು ವೇಳೆ ಕೋರ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಆದೇಶ ನೀಡಿದರೆ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆಗಲಿದ್ದಾರೆ.