ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ನಟ ಪವನ್ ಕಲ್ಯಾಣ್
ತಮ್ಮ ಸಂಗಡಿಗರೊಂದಿಗೆ ಕುಕ್ಕೆಗೆ ಬಂದಿದ್ದ ಪವನ್ ಕಲ್ಯಾಣ್ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿತು.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ನಾಗದೋಷ ನಿವಾರಣೆಗಾಗಿ ಆಶ್ಲೇಷ ಬಲಿ ಸೇವೆಗೆ ಹೆಸರುವಾಸಿಯಾಗಿದೆ. ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಲೇ ಇರುತ್ತಾರೆ.