ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕಿದೆ ಎಂಬ ನೆಪ ಹೇಳಿ ಹೈಕೋರ್ಟ್ ನಿಂದ ಆರು ವಾರಗಳ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಬಿಜಿಎಸ್ ಆಸ್ಪತ್ರೆಯಲ್ಲಿರುವ ದರ್ಶನ್ ಇದುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಅವರ ಜಾಮೀನು ಅವಧಿ ಮುಗಿಯಲು ಇನ್ನೇನು 10 ದಿನ ಬಾಕಿಯಿದೆಯಷ್ಟೇ.
ಈ ನಡುವೆ ಅವರು ನಾರ್ಮಲ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅದರ ತೀರ್ಪು ಇನ್ನಷ್ಟೇ ಹೊರಬರಬೇಕಿದೆ. ಆದರೆ ಒಂದು ವೇಳೆ ನಾರ್ಮಲ್ ಜಾಮೀನು ಸಿಗದೇ ಇದ್ದರೆ ಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ಲೆಕ್ಕಾಚಾರ ಹಾಕುತ್ತಿದ್ದಾರೆ.