ಬೆಂಗಳೂರು: ನಟಿ ರಮ್ಯಾ ವಿರುದ್ಧ ಅಶ್ಲೀಲವಾಗಿ ನಿಂದಿಸಿದ ಡಿಬಾಸ್ ಅಭಿಮಾನಿಗಳಿಗೆ ಈಗ ಸಂಕಷ್ಟ ಕಾದಿದೆ. ರಮ್ಯಾ ನೀಡಿರುವ 43 ಖಾತೆದಾರರಿಗಾಗಿ ಈಗ ಸೋಷಿಯಲ್ ಮೀಡಿಯಾದಲ್ಲಿ ಹುಡುಕಾಟ ನಡೆದಿದೆ.
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದ ರಮ್ಯಾ ವಿರುದ್ಧ ಡಿಬಾಸ್ ಅಭಿಮಾನಿಗಳು ಮುಗಿಬಿದ್ದಿದ್ದರು. ಅಶ್ಲೀಲ ಪದಗಳಲ್ಲಿ ನಿಂದಿಸಿದ್ದರು. ಹೀಗಾಗಿ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ದೂರಿನಲ್ಲಿ ತಮಗೆ ಅಶ್ಲೀಲ ಸಂದೇಶ ಕಳುಹಿಸಿದ 43 ಖಾತೆಗಳನ್ನು ಟ್ಯಾಗ್ ಮಾಡಿದ್ದರು.
ಇದೀಗ ಪೊಲೀಸರು ಆ ಎಲ್ಲಾ ಖಾತೆಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಖಾತೆದಾರರನ್ನು ಸುಮ್ಮನೇ ಬಿಡಲ್ಲ. ತಕ್ಕ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದರು. ಅದರಂತೆ ಈಗ 43 ಖಾತೆದಾರರಿಗಾಗಿ ಹುಡುಕಾಟ ಆರಂಭವಾಗಿದೆ.
ರಮ್ಯಾ ಪ್ರಕರಣದಲ್ಲಿ ಮಹಿಳಾ ಆಯೋಗ ಕೂಡಾ ಮಧ್ಯಪ್ರವೇಶಿಸಿತ್ತು. ಮಹಿಳೆಯರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ಕಾಮೆಂಟ್ ಮಾಡುವವರ ವಿರುದ್ಧ ತಕ್ಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು.