ಪೊನ್ನಿಯನ್ ಸೆಲ್ವನ್ ಒಟಿಟಿ ಹಕ್ಕಿನಿಂದಲೇ ನೂರು ಕೋಟಿ ಸಂಪಾದಿಸಿದ ನಿರ್ಮಾಪಕ
ಈ ಪ್ಯಾನ್ ಇಂಡಿಯಾ ಸಿನಿಮಾ ಸೆಪ್ಟೆಂಬರ್ 30 ರಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮೊದಲೇ ಚಿತ್ರದ ಬಗ್ಗೆ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು ಬಾಕ್ಸ್ ಆಫೀಸ್ ಧೂಳೀಪಟ ಮಾಡುವುದು ಖಚಿತ.
ಚಿಯಾನ್ ವಿಕ್ರಮ್, ಐಶ್ವರ್ಯಾ ರೈ ಸೇರಿದಂತೆ ಬಹುತಾರಾಗಣವಿರುವ ಈ ಐತಿಹಾಸಿಕ ಸಿನಿಮಾದ ಒಟಿಟಿ ಹಕ್ಕನ್ನು ಅಮೆಝೋನ್ ಪ್ರೈಮ್ ಬರೋಬ್ಬರಿ 125 ಕೋಟಿ ರೂ.ಗೆ ಖರೀದಿ ಮಾಡಿದೆ. ಆ ಮೂಲಕ ಬಿಡುಗಡೆಗೂ ಮೊದಲೇ ಚಿತ್ರ ನೂರು ಕೋಟಿ ಕ್ಲಬ್ ಸೇರಿದೆ.