ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡ ನಟಿ ಪೂಜಾ ಹೆಗ್ಡೆ

ಸೋಮವಾರ, 15 ಮಾರ್ಚ್ 2021 (10:28 IST)
ಹೈದರಾಬಾದ್ : ನಟಿ ಪೂಜಾ ಹೆಗ್ಡೆ ಭಾರತೀಯ ಚಲನಚಿತ್ರೋದ್ಯಮದ ಬಹುಬೇಡಿಕೆಯ ನಟಿ. ಪ್ರಸ್ತುತ ಅವರು ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿ ದೊಡ್ಡ ಬಜೆಟ್ ಯೋಜನೆಗಳನ್ನು ಹೊಂದಿದ್ದಾರೆ. ಇದೀಗ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಪೂಜಾ ಹೆಗ್ಡೆ ಅವರು ನಟ ವಿಜಯ್ ಅವರ 65ನೇ ಚಿತ್ರದಲ್ಲಿ ನಟಿಸುತ್ತಿದ್ದು, ಇದನ್ನು ಕೋಲಮಾವು ಕೋಕಿಲಾ ಖ್ಯಾತಿಯ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ ಮತ್ತು ಸನ್ ಪಿಕ್ಚರ್ಸ್ ನಿರ್ಮಿಸುತ್ತಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಪೂಜಾ ಹೆಗ್ಡೆ ವಿಜಯ್ ಅಭಿನಯದ ಚಿತ್ರಕ್ಕಾಗಿ 2.5 ಕೋಟಿ  ಸಂಭಾವನೆಯನ್ನು ಪಡೆಯುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ