ಪ್ರಧಾನಿ ಮೋದಿ ಯನ್ನು ಭೇಟಿ ಮಾಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಶುಕ್ರವಾರ, 4 ಮೇ 2018 (06:44 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.


ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬಿಜೆಪಿ ಸಮಾವೇಶಕ್ಕಾಗಿ ಆಗಮಿಸಿದ್ದ ವೇಳೆ ಚುನಾವಣಾ ಆಯೋಗದ ರಾಯಭಾರಿ ಆಗಿರುವ ಪುನೀತ್ ಅವರು ತಮ್ಮ ಪತ್ನಿ ಅಶ್ವಿನಿ ಅವರ ಜೊತೆ ಮೋದಿ ಅವರನ್ನು ಭೇಟಿ ಮಾಡಿ ಡಾ ರಾಜ್ ಕುಮಾರ್ ಅವರ ಬಗ್ಗೆ ಪುನೀತ್ ರಾಜ್ ಕುಮಾರ್ ಬರೆದಿರುವ 'ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ’ ಎಂಬ ಪುಸ್ತಕವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ತಮ್ಮ ಸಂತಸ ಹಂಚಿಕೊಂಡಿರುವ ಪುನೀತ್ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ