ಕರ್ನಾಟಕ ನೆರೆ ಪರಿಹಾರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊಟ್ಟ ಹಣವೆಷ್ಟು ಗೊತ್ತಾ?

ಶನಿವಾರ, 17 ಆಗಸ್ಟ್ 2019 (10:28 IST)
ಬೆಂಗಳೂರು: ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ನೆರವಾಗಲು ಇಡೀ ಸ್ಯಾಂಡಲ್ ವುಡ್ ಸ್ಪಂದಿಸಿದೆ. ಈ ನಡುವೆ ಕೆಲವು ಬಿಗ್ ಸ್ಟಾರ್ ಗಳು ನೆರೆ ಪರಿಹಾರ ನಿಧಿಗೆ ಕೊಟ್ಟ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಸುಳ್ಳು ಸುದ್ದಿ ಹಬ್ಬಸಿದ್ದೂ ಇದೆ.


ಅದರಲ್ಲೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 25 ಕೋಟಿ ರೂ. ದಾನ ಮಾಡಿದ್ದಾರೆ ಎಂದೆಲ್ಲಾ ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ಈಗ ಪುನೀತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದು ಬಹಿರಂಗವಾಗಿದೆ.

ಪುನೀತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲಿಗೆ ಗಾಳಿ ಸುದ್ದಿಗಳಿಗೆ ಬ್ರೇಕ್ ಬಿದ್ದಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ