ಬರ್ತ್ ಡೇ ದಿನ ಒಳ್ಳೆ ಕೆಲಸ ಮಾಡಲಿದ್ದಾರೆ ಪ್ರಜ್ವಲ್ ದೇವರಾಜ್

ಶನಿವಾರ, 4 ಜುಲೈ 2020 (09:49 IST)
ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಗೆ ಇಂದು ಜನ್ಮದಿನದ ಸಂಭ್ರಮ. ತಮ್ಮ ಜನ್ಮದಿನವನ್ನು ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ.


ನಿನ್ನೆಯಷ್ಟೇ ಪ್ರಜ್ವಲ್ ಕೊರೋನಾ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಪಿಪಿಇ ಕಿಟ್ ವಿತರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದಲ್ಲದೆ, ಪ್ರತೀ ವರ್ಷದಂತೆ ಈ ವರ್ಷವೂ ಅವರ ಅಭಿಮಾನಿ ಸಂಘದವರು ವೃದ್ಧಾಶ್ರಮದಲ್ಲಿ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣಗೊಳಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ