ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಬುಧವಾರ, 4 ಅಕ್ಟೋಬರ್ 2017 (19:49 IST)
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ 52 ವರ್ಷ ವಯಸ್ಸಿನ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಆಕ್ಟೋಬರ್ 7 ರಂದು ನ್ಯಾಯಾಲಯದಲ್ಲಿ ನಟ ಪ್ರಕಾಶ್ ರೈ ವಿರುದ್ಧದ ದೂರು ವಿಚಾರಣೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ಪತ್ರಕರ್ತೆ ಮತ್ತು ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಪ್ರಧಾನಿ ಮೋದಿ ಮೌನವಹಿಸಿರುವದನ್ನು ಟೀಕಿಸಿದ ಪ್ರಕಾಶ್ ರೈ, ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸುತ್ತಿರುವವರನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. 
\
ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ) ನ 11 ನೇ ಸಭೆಯಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ್ ಹಂತಕರ ಬಂಧನವಾಗಿಲ್ಲ. ಆದಾಗ್ಯೂ ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವರು ದ್ವೇಷವನ್ನು ಹರಡಿಸುತ್ತಾ ಲಂಕೇಶ್ ಹತ್ಯೆಗೆ ವಿಕೃತ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 
 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿ,ಅವರ ಹೇಳಿಕೆಗಳನ್ನು ಗಮನಿಸಿದಾಗ ಅವರು ಮುಖ್ಯಮಂತ್ರಿಯೋ ಅಥವಾ ಒಬ್ಬ ಅರ್ಚಕರೋ ಎನ್ನುವುದು ನಿಮಗೆ ಅರ್ಥವಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನನಗಿಂತ ಉತ್ತಮ ನಟರು. ನನ್ನ ಎಲ್ಲಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಅವರಿಗೆ ನೀಡಬೇಕು ಎಂದು ಯೋಚಿಸುತ್ತಿರುವುದಾಗಿ ನಟ ಪ್ರಕಾಶ್ ರೈ ಟಾಂಗ್ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ