ಸೀಮಂತದ ಸಂಭ್ರಮದಲ್ಲಿ ನಟಿ ಪ್ರಣೀತಾ ಸುಭಾಶ್

ಸೋಮವಾರ, 16 ಮೇ 2022 (16:42 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್ ತಮ್ಮ ಸೀಮಂತ ಶಾಸ್ತ್ರ ನೆರವೇರಿಸಿಕೊಂಡಿದ್ದಾರೆ.

ಇತ್ತೀಚೆಗೆ ಪ್ರಣೀತಾ ಸಾಮಾಜಿಕ ಜಾಲತಾಣದ ಮೂಲಕ ತಾಯಿಯಾಗುತ್ತಿರುವ ವಿಚಾರ ಬಹಿರಂಗಪಡಿಸಿದ್ದರು. ಇದೀಗ ಅವರ ಸೀಮಂತ ಶಾಸ್ತ್ರ ನೆರವೇರಿದ್ದು, ಈ ಕ್ಷಣಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಉದ್ಯಮಿ ನಿತಿನ್ ರಾಜು ಜೊತೆ ಪ್ರಣೀತಾ ವಿವಾಹ ನೆರವೇರಿತ್ತು. ಕನ್ನಡ ಮಾತ್ರವಲ್ಲದೆ, ಹಿಂದಿ, ತಮಿಳು, ತೆಲುಗಿನಲ್ಲೂ ನಟಿಸಿರುವ ಪ್ರಣೀತಾ ಸಾಮಾಜಿಕ ಕೆಲಸಗಳಿಂದಲೂ ಗುರುತಿಸಿಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ