ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆ ಪ್ರಭಾಸ್ ಮುಂದಿನ ಸಿನಿಮಾ ಅನೌನ್ಸ್

ಬುಧವಾರ, 2 ಡಿಸೆಂಬರ್ 2020 (16:56 IST)
ಬೆಂಗಳೂರು: ಕೆಜಿಎಫ್ ಸಿನಿಮಾ ನಿರ್ಮಿಸಿದ ಕನ್ನಡ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ ತನ್ನ ಮುಂದಿನ ಚಿತ್ರವನ್ನು ಘೋಷಿಸಿದೆ. ನಿರೀಕ್ಷೆಯಂತೇ ರೆಬಲ್ ಸ್ಟಾರ್ ಪ್ರಭಾಸ್ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ.


ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಪ್ರಭಾಸ್ ಪಕ್ಕಾ ಆಕ್ಷನ್ ಎಂಟರ್ ಟೈನರ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಈ ಸಿನಿಮಾವೂ ಪ್ಯಾನ್ ಇಂಡಿಯಾ ಸಿನಿಮಾಗಿರಲಿದ್ದು, ಇದರ ಟೈಟಲ್ ‘ಸಲಾರ್’ ಎಂದಾಗಿರಲಿದೆ. ಮುಂಬರುವ ಜನವರಿಯಿಂದ ಚಿತ್ರೀಕರಣ ಶುರುವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ