ಖ್ಯಾತ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಮೌನವಹಿಸಿರುವುದಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕ್ರತ ಬಹುಭಾಷಾ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಪ್ರಧಾನಿ ಮೋದಿ ಮೌನಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಓರ್ವ ದೊಡ್ಡ ನಟ ಎಂದು ಲೇವಡಿ ಮಾಡಿದ್ದಾರೆ.
ಗೌರಿ ಲಂಕೇಶ್ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡದಿದ್ದಲ್ಲಿ ರಾಷ್ಟ್ರಪ್ರಶಸ್ತಿಯನ್ನು ಹಿಂತಿರುಗುಸುತ್ತೇನೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ನನ್ನನ್ನು ಟೀಕಿಸುವವರಿಗೆ ಧೈರ್ಯವಿದ್ದರೆ ಮುಂದೆ ಬಂದು ಮಾತನಾಡಲಿ ಎಂದು ನಟ ಪ್ರಕಾಶ್ ರೈ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.