ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಸರ್ಪೈಸ್ ಕೊಡಲಿದ್ದಾರೆ ಪತ್ನಿ ಪ್ರಿಯಾ ಸುದೀಪ್

ಶುಕ್ರವಾರ, 1 ಸೆಪ್ಟಂಬರ್ 2023 (16:01 IST)
ಬೆಂಗಳೂರು: ನಾಳೆ ಕಿಚ್ಚ ಸುದೀಪ್ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಈ ವಿಶೇಷ ಕ್ಷಣಕ್ಕೆ ಕಿಚ್ಚನಿಗೆ ಸರ್ಪೈಸ್ ಒಂದು ಕಾದಿದೆ ಎಂದು ಪತ್ನಿ ಪ್ರಿಯಾ ಸುದೀಪ್ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಮೂಲಕ ಸುದೀಪ್ ಗೆ ಸರ್ಪೈಸ್ ನೀಡುತ್ತಿರುವುದಾಗಿ ಪ್ರಿಯಾ ಹೇಳಿದ್ದಾರೆ. ಅದೇನೆಂದು ತಿಳಿಯುವ ಕುತೂಹಲ ಅಭಿಮಾನಿಗಳಲ್ಲೂ ಇದೆ.

‘ಇಂದು ನಿಮ್ಮ ಪ್ರೀತಿಯ ಕಿಚ್ಚನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಕಾಯುತ್ತಿದ್ದೇನೆ. ಇಂದಿನ ಕಾರ್ಯಕ್ರಮದಲ್ಲಿ ನನ್ನ ಕಡೆಯಿಂದ ನಿಮ್ಮೆಲ್ಲರ ಪರವಾಗಿ ಕಿಚ್ಚನಿಗೆ ಒಂದು ವಿಶೇಷವಾದ ಅಚ್ಚರಿ ಕಾದಿದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಚ್ಚರಿಯನ್ನು ಆನಂದಿಸಿ’ ಎಂದು ಪ್ರಿಯಾ ಹೇಳಿದ್ದಾರೆ. ಇಂದು ರಾತ್ರಿಯಿಂದಲೇ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಸುದೀಪ್ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ. ಈ ವೇಳೆ ಆ ಅಚ್ಚರಿ ಹೊರಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ