ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ನಟಿ ಪ್ರಿಯಾಮಣಿ

ಗುರುವಾರ, 22 ಏಪ್ರಿಲ್ 2021 (09:48 IST)
ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ 10 ನೇ ತರಗತಿ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿ ಎಂದು ನಟಿ ಪ್ರಿಯಾಮಣಿ ಆಗ್ರಹಿಸಿದ್ದಾರೆ.


ಕೊರೋನಾ ಹಿನ್ನಲೆಯಲ್ಲಿ ಈಗಾಗಲೇ ಸಿಬಿಎಸ್ ಸಿ ಮತ್ತು ಐಸಿಎಸ್ ಸಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳು ರದ್ದಾಗಿವೆ. ರಾಜ್ಯ ಸರ್ಕಾರ 1 ರಿಂದ 9 ನೇ ತರಗತಿವರೆಗಿನ ಮಕ್ಕಳ ಪರೀಕ್ಷೆ ರದ್ದುಗೊಳಿಸಿದೆ. ಆದರೆ 10 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಯಾವುದೇ ನಿರ್ಧಾರ ಹೇಳಿಲ್ಲ.

ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಪ್ರಿಯಾಮಣಿ ‘ವಿದ್ಯಾರ್ಥಿಗಳೇ ನಮ್ಮ ಭವಿಷ್ಯ. ವಿದ್ಯಾರ್ಥಿಗಳ ಪರೀಕ್ಷೆಗಿಂತ ಜೀವವೇ ಮುಖ್ಯ. ಪರೀಕ್ಷೆಗಳನ್ನು ತಡಮಾಡಬಹುದು. ಆದರೆ ಜೀವ ಉಳಿಸುವುದನ್ನು ತಡ ಮಾಡಲಾಗದು. ದಯವಿಟ್ಟು ಪರೀಕ್ಷೆಗಳನ್ನು ರದ್ದು ಮಾಡಿ, ವಿದ್ಯಾರ್ಥಿಗಳು ಸುರಕ್ಷಿತವಾಗಿರಲಿ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ