ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬುಗೆ ಅಪಘಾತ

ಭಾನುವಾರ, 26 ಜೂನ್ 2022 (20:15 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸೇರಿದಂತೆ ಹಲವು ಕನ್ನಡ ಸಿನಿಮಾಗಳಿಗೆ ನಿರ್ಮಾಪಕರಾಗಿರುವ ಸೂರಪ್ಪ ಬಾಬು ಅವರ ಕಾರು ಅಪಘಾತಕ್ಕೀಡಾಗಿದೆ.

ತಮಿಳುನಾಡಿನ ಬ್ರಹ್ಮ ದೇವಸ್ಥಾನಕ್ಕೆ ಇನ್ನೋವಾ ಕಾರಿನಲ್ಲಿ ಕುಟುಂಬ ಸಮೇತರಾಗಿ ಸೂರಪ್ಪ ಬಾಬು ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತಕ್ಕೀಡಾಗಿದೆ.

ಸೂರಪ್ಪ ಬಾಬು ಕಾಲಿಗೆ ಕೊಂಚ ಏಟಾಗಿದ್ದು, ಉಳಿದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ