ಸಲಾರ್ ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ: ಟ್ರೈಲರ್ ನೋಡಿ ಸಂಭ್ರಮಿಸಿದ ವಿಜಯ್ ಕಿರಗಂದೂರು

ಶುಕ್ರವಾರ, 1 ಡಿಸೆಂಬರ್ 2023 (17:07 IST)
Photo Courtesy: Twitter
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಟ್ರೈಲರ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಿಡುಗಡೆಯಾಗಲಿದೆ.

ಇಂದು ಸಂಜೆ 7.19 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಲಿದೆ. ಬಹಳ ದಿನಗಳಿಂದ ಅಭಿಮಾನಿಗಳು ಕಾಯುತ್ತಿದ್ದ ಟ್ರೈಲರ್ ನ್ನು ಈಗಾಗಲೇ ನಿರ್ಮಾಪಕ ವಿಜಯ್ ಕಿರಗಂದೂರು ವೀಕ್ಷಿಸಿದ್ದಾರೆ.

ಟ್ರೈಲರ್ ನೋಡಿ ವಿಜಯ್ ಕಿರಗಂದೂರು ಖುಷಿಯಾಗಿದ್ದು, ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಲಾರ್ ಟ್ರೈಲರ್ ಸ್ಪೋಟವಾಗಲಿದೆ ಎಂದು ಹೊಂಬಾಳೆ ಫಿಲಂಸ್ ಪ್ರಕಟಣೆ ನೀಡಿದೆ.

ಡಿಸೆಂಬರ್ 29 ರಂದು ಸಲಾರ್ ಸಿನಿಮಾ ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೆಜಿಎಫ್ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಇದಾಗಿದೆ. ಪ್ರಭಾಸ್ ನಾಯಕರಾಗಿದ್ದು ಶ್ರುತಿ ಹಾಸನ್‍ ನಾಯಕಿಯಾಗಿ ಅಭಿನಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ