ಕೆಲ ವರ್ಷಗಳಿಂದ ನ್ಯೂಯಾರ್ಕ್‌ನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ನಟ ಪುನೀತ್ ರಾಜ್‌ಕುಮಾರ್ ಹಿರಿಯ ಪುತ್ರಿ ಧೃತಿ ಅವರು ಇದೀಗ ಪದವಿ ಪಡೆದಿದ್ದಾರೆ.
ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್ ಶಿಕ್ಷಣ ಸಂಸ್ಥೆಯಲ್ಲಿ ಧೃತಿ ಶಿಕ್ಷಣ ಪೂರ್ಣಗೊಳಿಸಿ ಡಿಸೈನರ್ ಪದವಿ ಪಡೆದಿದ್ದಾರೆ. ಧನ್ಯಾ ರಾಮ್‌ಕುಮಾರ್ ಅವರು ಮನೆ ಮಗಳ ಸಾಧನೆಗೆ ಅವರ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದಾರೆ.
ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್ ಶಿಕ್ಷಣ ಸಂಸ್ಥೆಯಲ್ಲಿ ಫ್ಯಾಷನ್ ಡಿಸೈನ್, ಇಂಟೀರಿಯರ್ ಡಿಸೈನ್, ಗ್ರಾಫಿಕ್ಸ್ ಡಿಸೈನ್ ಸೇರಿದಂತೆ ಹಲವು ಕೋರ್ಸ್‌ಗಳಿವೆ.
ಪ್ರಕೃತಿ ಬನವಾಸಿ ಬರಹದಲ್ಲಿ ಅಪ್ಪು ಜೀವನ ಚರಿತ್ರೆ ಬರಲಿದೆ. ಇತ್ತೀಚೆಗೆ ಪುಸ್ತಕದ ಲುಕ್ ಕೂಡ ರಿಲೀಸ್ ಮಾಡಿದ್ದರು. ಶೀಘ್ರದಲ್ಲೇ ಈ ಪುಸ್ತಕ ಮಾರುಕಟ್ಟೆಗೆ ಪ್ರವೇಶ ಮಾಡಲಿದೆ.